LATEST NEWS
ಕಾಶ್ಮೀರದ ಜಾಮಿಯಾ ಮಸೀದಿಯಲ್ಲಿ ಭಾರೀ ಅಗ್ನಿ ಅವಘಡ
ಶ್ರೀನಗರ, ನವೆಂಬರ್ 17: ಜಮ್ಮು ಮತ್ತು ಕಾಶ್ಮೀರದ ದ್ರಾಸ್‌ನಲ್ಲಿರುವ ಜಾಮಿಯಾ ಮಸೀದಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮಸೀದಿ ಅಪಾರ ಹಾನಿಗೊಳಗಾಗಿದೆ.
ಭಾರತೀಯ ಸೇನೆ, ಪೊಲೀಸ್, ಅಗ್ನಿಶಾಮಕ ಹಾಗೂ ತುರ್ತು ವಿಭಾಗದ ಸಹಾಯದಿಂದ ಬೆಂಕಿ ನಂದಿಸಲಾಗಿದೆ. ಮೂಲಗಳ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಾಮಿಯಾ ಮಸೀದಿಯ ಉಸ್ತುವಾರಿ, ದ್ರಾಸ್‌ನ ಅತ್ಯಂತ ಹಳೆಯ ಮಸೀದಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವುದು ದುರದೃಷ್ಟಕರ ಸಂಗತಿ. ದ್ರಾಸ್ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ. ಆದರೆ ಇಲ್ಲಿ ಒಂದೇ ಒಂದು ಅಗ್ನಿಶಾಮಕ ಸೇವೆಯೂ ಇಲ್ಲ. ಇಂತಹ ಘಟನೆಗಳು ಅನೇಕ ಬಾರಿ ನಡೆದಿದ್ದರೂ ಕೇಂದ್ರಾಡಳಿತ ಪ್ರದೇಶ ಇನ್ನೂ ಬುದ್ದಿ ಕಲಿತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.