Connect with us

LATEST NEWS

ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಹಿರಿಯ ಸಾಹಿತಿ ಕೋಟೇಶ್ವರ ಸೂರ್ಯನಾರಾಯಣ ರಾವ್

ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಹಿರಿಯ ಸಾಹಿತಿ ಕೋಟೇಶ್ವರ ಸೂರ್ಯನಾರಾಯಣ ರಾವ್

ಮಂಗಳೂರು ಡಿಸೆಂಬರ್ 13: ಶಿರಾಡಿ ಸಮೀಪದ ಪುಲ್ಲೋಟೆ ಎಂಬಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಬಸ್​ನಿಂದ ಬಹಿರ್ದೆಸೆಗೆಂದು ಕೆಳಗಿಳಿದಿದ್ದ ಹಿರಿಯ ಸಾಹಿತಿ ಕೋಟೇಶ್ವರ ಸೂರ್ಯನಾರಾಯಣ ರಾವ್ ಮೃತಪಟ್ಟಿದ್ದಾರೆ.

ಕುಂದಾಪುರದಲ್ಲಿ ನಡೆಯಬೇಕಿದ್ದ ಒಂದು ಕಾರ್ಯಕ್ರಮ ನಿಮಿತ್ತ ಬೆಂಗಳೂರಿನಿಂದ ಬಸ್ಸಿನಲ್ಲಿ ಬರುತ್ತಿದ್ದರು. ಬಸ್ ಶಿರಾಡಿ ಸಮೀಪದ ಪುಲ್ಲೊಟೆ ಎಂಬಲ್ಲಿ ನಿಲ್ಲಿಸಿದ ಸಂದರ್ಭದಲ್ಲಿ ಸೂರ್ಯನಾರಾಯಣ ರಾವ್ ಅವರು ಬಹಿರ್ದೆಸೆಗೆ ಬಸ್ಸಿನಿಂದ ಹೊರಗಡೆ ಇಳಿದಿದ್ದರು ಎನ್ನಲಾಗ್ತಿದೆ. ಈ ವೇಳೆ ವೇಗವಾಗಿ ಬಂದ ಕಾರೊಂದು ಸೂರ್ಯನಾರಾಯಣ ರಾವ್ ಅವರಿಗೆ ಡಿಕ್ಕಿ ಹೊಡೆದಿದೆ.

ಅನಂತರ ತೀವ್ರವಾಗಿ ಗಾಯಗೊಂಡ ಇವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆದ್ರೆ ಅವರು ಅಲ್ಲೇ ಮೃತಪಟ್ಟ ಬಗ್ಗೆ ಮಾಹಿತಿ ಲಭಿಸಿದೆ.ಬಸ್ ಚಾಲಕ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ವಾಹನ ನಿಲ್ಲಿಸಿದ್ದು ಮತ್ತು ಕಾರು ಅತಿ ವೇಗವಾಗಿ ಬಂದಿರುವುದೇ ಅಪಘಾತದ ಕಾರಣ ಎನ್ನಲಾಗ್ತಿದೆ. ಸದ್ಯ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.