ಸ್ವಿಟ್ಜರ್ಲೆಂಡ್‌ : ಹೊಸವರ್ಷಾಚರಣೆ ಸಂದರ್ಭ ಸ್ವಿಸ್‌ ಆಲ್ಪ್ಸ್‌ ರೆಸಾರ್ಟ್‌ ಟೌನ್‌ನ ಬಾರ್‌ನಲ್ಲಿ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 40ಕ್ಕೂ ಅಧಿಕ ಮಂದಿ ಸಾವನಪ್ಪಿದ್ದು, 115 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.


ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದಲ್ಲಿರುವ ಲೆ ಕಾನ್ಸ್ಟೆಲೇಷನ್ ಬಾರ್ ಮತ್ತು ಲೌಂಜ್‌ನ ನೆಲಮಾಳಿಗೆಯಲ್ಲಿ ಸ್ಪೋಟ ಸಂಭವಿಸಿದ್ದು. ಈ ವೇಳೆ ಬಾರ್‌ನಲ್ಲಿ 150 ಕ್ಕೂ ಹೆಚ್ಚು ಜನರು ಇದ್ದರು ಎಂದು ವರದಿಯಾಗಿದೆ.


ಇತ್ತೀಚಿನ ಮಾಹಿತಿಗಳ ಪ್ರಕರಾ 40ಕ್ಕೂ ಅಧಿಕ ಮಂದಿ ಸಾವನಪ್ಪಿದ್ದು, 100ಕ್ಕೂ ಅಧಿಕ ಮಂದಿ ಗಂಭೀರ ಗಾಯಗಳಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ‘ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಈ ಪ್ರಕ್ರಿಯೆ ಪೊರ್ಣಗೊಳ್ಳಲು ದೀರ್ಘ ಸಮಯ ತೆಗೆದುಕೊಳ್ಳುತ್ತದೆ. ನಂತರವೇ ಸಾವು– ನೋವಿನ ಸಂಖ್ಯೆ ನಿಖರವಾಗಿ ತಿಳಿಯಲಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳು ಘಟನೆಯ ನಂತರ ಬಾರ್‌ನಿಂದ ದೊಡ್ಡ ಪ್ರಮಾಣದ ಹೊಗೆ ಹೊರಬರುತ್ತಿರುವುದನ್ನು ತೋರಿಸುತ್ತವೆ. “ಅಜ್ಞಾತ ಮೂಲದ ಸ್ಫೋಟ ಸಂಭವಿಸಿದೆ. ಹಲವಾರು ಮಂದಿ ಗಾಯಗೊಂಡಿದ್ದಾರೆ ಮತ್ತು ಹಲವಾರು ಮಂದಿ ಸಾವನ್ನಪ್ಪಿದ್ದಾರೆ” ಎಂದು ಪೊಲೀಸ್ ವಕ್ತಾರ ಗೇಟನ್ ಲಾಥಿಯಾನ್ AFP ಗೆ ತಿಳಿಸಿದ್ದಾರೆ.

Share Information