Connect with us

  LATEST NEWS

  ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವು..!

  ಚೆನ್ನೈ, ಜುಲೈ 25: ಮ್ಯಾರಥಾನ್‌ನಲ್ಲಿ ಭಾಗವಹಿಸಿದ 20 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮೃತನನ್ನು ಕಲ್ಲಕುರಿಚಿಯ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ನಡೆದ ಉತಿರಂ 2023 ರಕ್ತದಾನ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ.

  ಈ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಸುಬ್ರಮಣಿಯನ್ ಹಾಗೂ ವಾಣಿಜ್ಯ ತೆರಿಗೆ ಮತ್ತು ನೋಂದಣಿ ಸಚಿವ ಪಿ ಮೂರ್ತಿ ಅವರು ಚಾಲನೆ ನೀಡಿದ್ದರು. ಮುಂಜಾನೆ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಬಳಿಕ ವಿದ್ಯಾರ್ಥಿ 1 ಗಂಟೆಗಳ ಕಾಲ ಆರೋಗ್ಯವಾಗಿಯೇ ಇದ್ದಂತೆ ಕಾಣಿಸುತ್ತಿದ್ದ ಎಂದು ಆತನ ಸಹಪಾಠಿಗಳು ತಿಳಿಸಿದ್ದಾರೆ.

  ಬಳಿಕ ಆತ ಮೂರ್ಛೆ ಹೋಗಿದ್ದು, ತಕ್ಷಣ ಆತನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳು ವಿದ್ಯಾರ್ಥಿಯನ್ನು 8:45ರ ಸುಮಾರಿಗೆ ತುರ್ತು ವಿಭಾಗಕ್ಕೆ ದಾಖಲಿಸಿದ್ದಾರೆ. ಅಲ್ಲಿ ಆತನಿಗೆ ಕೃತಕ ಉಸಿರಾಟದ ಬೆಂಬಲ ನೀಡಲಾಗಿದೆ. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಬೆಳಗ್ಗೆ 10:10ರ ಸುಮಾರಿಗೆ ಆತ ಹೃದಯ ಸ್ಥಂಭನಕ್ಕೆ ಒಳಗಾಗಿದ್ದಾನೆ.

  ಆತನನ್ನು ವೈದ್ಯರು ಬದುಕಿಸಲು ಪ್ರಯತ್ನಿಸಿದರೂ ಬೆಳಗ್ಗೆ 10:45ಕ್ಕೆ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ದಿನೇಶ್ ಕುಮಾರ್ ಮಧುರೈನ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ವ್ಯಾಸಂಗ ಮಾಡುತ್ತಿದ್ದು, ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply