Connect with us

LATEST NEWS

ಕುಂಭಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್​- ಟ್ರಕ್​ ನಡುವೆ ಭೀಕರ ಅಪಘಾತ : 7 ಜನ ಸಾವು

ಜಬಲ್ಪುರ : ಕುಂಭಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್​ ಹಾಗೂ ಟ್ರಕ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ- ಪ್ರಯಾಗ್​ರಾಜ್​ ಮಾರ್ಗದಲ್ಲಿ ಇಂದು ಸಂಭವಿಸಿದೆ.

ಜಬಲ್ಪುರ – ಪ್ರಯಾಗ್​ರಾಜ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ಮಿನಿ ಬಸ್,​ ವಿರುದ್ಧ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಸಿಮೆಂಟ್​ ತುಂಬಿದ್ದ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಮೃತರೆಲ್ಲರೂ ಆಂಧ್ರಪ್ರದೇಶದ ನಿವಾಸಿಗಳು ಎಂದು ಹೇಳಲಾಗುತ್ತಿದೆ.

ಜಬಲ್ಪುರ ಜಿಲ್ಲಾಧಿಕಾರಿ ಹಾಗೂ ಪೊಲೀಸ್​ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *