Connect with us

  KARNATAKA

  ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು..!

  ಅಂಕೋಲ :  ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ  ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಗ್ರಾಮದ ಬಳಿ ತಡರಾತ್ರಿ ಸಂಭವಿಸಿದೆ.

  ಬೈಕ್‌ನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಅಂಕೋಲಾದ ಸುಮಂತ ಹರಿಕಂತ್ರ ಮೃತ ದುರ್ದೈವಿ ಯಾಗಿದ್ದಾನೆ.  ಬೈಕ್‌ನಲ್ಲಿದ್ದ ಸುಮಿತ್ ಹರಿಕಂತ್ರ, ಚಾಣಕ್ಯ ಹರಿಕಂತ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಬೈಕ್ ಸವಾರರು ಮಂಗಳವಾರ (ಏಪ್ರಿಲ್‌ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟೆಂಪೋ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ, ಬೈಕ್‌ ಸವಾರನ ಮೇಲೆ ಬೈಕ್‌ ಬಿದ್ದಿದ್ದರಿಂದ ಮೇಲೆ ಏಳಲು ಆಗಿಲ್ಲ. ಹೀಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲೇ ಸಿಲುಕಿದ್ದ ಬೈಕ್‌ ಸವಾರ ಸುಮಂತ ಹರಿಕಂತ್ರ ಅವರ ಮೈಗೂ ಬೆಂಕಿ ತಗುಲಿದೆ. ಹೀಗಾಗಿ ಅವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಗಾಯಾಳುಗಳಾದ ಸುಮಿತ್‌ ಹಾಗೂ ಚಾಣಕ್ಯ ಹರಿಕಂತ್ರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

   

  Share Information
  Advertisement
  Click to comment

  You must be logged in to post a comment Login

  Leave a Reply