ಪುತ್ತೂರು, ಮೇ 17: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ, ಸ್ಕೂಟರ್ ಸವಾರ ಬೆಳ್ಳಾರೆ ಕೋಡಿಬೈಲು ನಿವಾಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 17ರಂದು ಬೆಳಗ್ಗಿನ ಜಾವ ನಡೆದಿದೆ.
ಸ್ಕೂಟರ್ ಸವಾರ ಬೆಳ್ಳಾರೆ ಕೋಡಿಬೈಲು ನಿವಾಸಿ ಸತ್ಯನಾರಯಣ ಭಟ್ಎಂದು ಗುರುತಿಸಲಾಗಿದೆ. ಅವರು ಬೆಳ್ಳಾರೆಯಿಂದ ಮಂಗಳೂರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸ್ಕೂಟರ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಮೃತರ ದೇಹವನ್ನು ಪುತ್ತೂರು ಆದರ್ಶ ಆಸ್ಪತ್ರೆಯ ಆಂಬುಲೆನ್ಸ್ ದಯಾನಂದ ಅವರ ಸಹಕಾರದೊಂದಿಗೆ ಪುತ್ತೂರು ಸರಕಾರಿ ಅಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎಸ್.ಐ ರಾಮನಾಯ್ಕ್ ಮತ್ತು ಸಿಬ್ಬಂದಿಗಳು ತೆರಳಿ ಮಾಹಿತಿ ಪರಿಶೀಲನೆ ನಡೆಸಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.