Connect with us

    KARNATAKA

    ಟೈರ್ ಸ್ಫೋಟಗೊಂಡು ಕಾರು ಪಲ್ಟಿ; ಹೆಡ್‌ಕಾನ್‌ಸ್ಟೇಬಲ್‌ ಸ್ಥಳದಲ್ಲೇ ಮೃತ್ಯು

    ಕಲಬುರಗಿ, ಆಗಸ್ಟ್ 07: ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ಹೆಡ್‌ಕಾನ್‌ಸ್ಟೇಬಲ್‌ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೆಟ್ರೋಲ್ ಬಂಕ್ ಬಳಿ ಸೋಮವಾರ ವರದಿಯಾಗಿದೆ.

    ಮೃತರನ್ನು ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಮೋಮಿನಪುರದ ಮುಇಝ್ಝುದ್ದೀನ್ (52) ಎಂದು ಗುರುತಿಸಲಾಗಿದೆ. ಘಟನೆಯಿಂದ ಅವರ ಸಹೋದರ ನಜುಮುದ್ದಿನ್ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

    ಇವರು ಕಲಬುರಗಿಯಿಂನದ ಕಾರಿನಲ್ಲಿ ಸೇಡಂಗೆ ಹೋಗುತ್ತಿದ್ದಾಗ ಮಳಖೇಡ ಹತ್ತಿರ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿದೆ ಎಂದು ಹೇಳಲಾಗಿದೆ.ಘಟನೆ ಸಂಬಂಧ ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *