KARNATAKA
ತುಮಕೂರು : ಗಣೇಶ ವಿಸರ್ಜನೆಗೆ ಹೋದ ತಂದೆ- ಮಕ್ಕಳು ಜಲಸಮಾಧಿ..!
ತುಮಕೂರು : ಗಣೇಶ ವಿಸರ್ಜನೆ ವೇಳೆ ಕೆರೆಗೆ ಇಳಿದಿದ್ದ, ತಂದೆ-ಮಗ ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವಂತಹ ಘಟನೆ ತುಮಕೂರಿನ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಭಾನುವಾರ ಸಂಭವಿಸಿದೆ.
ತಂದೆ ರೇವಣ್ಣ(46), ಪುತ್ರ ಶರತ್(26) ಹಾಗೂ ದಯಾನಂದ ಮೃತ ದುರ್ದೈವಿಗಳಾಗಿದ್ದಾರೆ. ರವಿವಾರ ಗ್ರಾಮದಲ್ಲಿ ಇಟ್ಟಿದ್ದ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತ ದಯಾನಂದ್ಗೆ ಇತ್ತೀಚೆಗಷ್ಟೇ ಮದುವೆ ಆಗಿತ್ತು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ, ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login