Connect with us

    KARNATAKA

    ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಇಬ್ಬರು ಸ್ಥಳದಲ್ಲೇ ಸಾವು

    ಚಾಮರಾಜನಗರ, ಆಗಸ್ಟ್ 05: ಜಿಲ್ಲೆಯಲ್ಲಿ ಚಲಿಸುತ್ತಿದ್ದಂತ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ.

    ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಬಳಿಯಲ್ಲಿನ ಹೆಗ್ಗವಾಡಿ ಕ್ರಾಸ್ ಬಳಿಯಲ್ಲಿ ಇಂದು, ಮಾರುತಿ ಓಮ್ನಿ ಕಾರಿನ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಬೇಕಿದೆ.

    Share Information
    Advertisement
    Click to comment

    You must be logged in to post a comment Login

    Leave a Reply