ಚಿಕ್ಕಬಳ್ಳಾಪುರ ಮಾರ್ಚ್ 09: ಸ್ನೇಹಿತೆಯ ಲವ್ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಿ ನಡೆದ ಗಂಡ ಹೆಂಡತಿ ಜಗಳದಲ್ಲಿ ಮಹಿಳೆ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದ್ದು, ಗಂಡ ಗಂಗರಾಜು ಪತ್ನಿಯನ್ನು ಕೊಂದು ನೇಣು ಹಾಕಿದ್ದಾನೆ ಎಂದು ಮೃತ ವರಲಕ್ಷ್ಮೀ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಘಟನೆ ನಡೆದ ದಿನ ಮೃತ ವರಲಕ್ಷ್ಮಿ ಸ್ನೇಹಿತೆ ಶ್ರಾವಣಿಯ ಪ್ರಿಯಕರ ಕರೆ ಮಾಡಿದ್ದ. ಆತನ ಕರೆಯನ್ನು ವರಲಕ್ಷ್ಮಿ ರಿಸೀವ್ ಮಾಡಿದ್ದಳು. ಇದೇ ವಿಚಾರಕ್ಕೆ ಗಂಡ, ಹೆಂಡತಿ ಮಧ್ಯೆ ಗಲಾಟೆಯಾಗಿತ್ತು. ಪ್ರೇಮಿಗಳ ಮಧ್ಯೆ ಮಧ್ಯಸ್ಥಿಕೆ ವಹಿಸಿಬೇಡಿ ಎಂದು ಗಂಡ ಬುದ್ಧಿವಾದ ಹೇಳಿದ್ದ. ಆದರೆ ಗಲಾಟೆ ತಾರಕಕ್ಕೇರಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿಯ ಶವ ಪತ್ತೆಯಾಗಿದೆ. ಸದ್ಯ ಮೃತಳ ಕುಟುಂಬಸ್ಥರು ಗಂಡ, ಅತ್ತೆ ಹಾಗೂ ಮಾವನ ವಿರುದ್ಧ ಕೊಲೆ ಆರೋಪ ಹೊರಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದೆ.