LATEST NEWS
ಕಳ್ಳತನಕ್ಕೆ ಬಂದು ಮಹಿಳೆಯನ್ನು ಗುಂಡು ಹಾರಿಸಿ ಹತ್ಯೆ..!

ನವದೆಹಲಿ: ಇಬ್ಬರು ಅಪರಿಚಿತ ಬಂದೂಕುಧಾರಿಗಳು ಕಳ್ಳತನಕ್ಕೆ ಯತ್ನಿಸಿ ಮಹಿಳೆಯೊಬ್ಬಳನ್ನು ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ದೆಹಲಿಯ ಜೈತ್ ಪುರನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪೂಜಾ ಯಾದವ್ (24) ಎಂದು ಗುರುತಿಸಲಾಗಿದೆ. ಬಂದೂಕುಧಾರಿಗಳು ಮಾಸ್ಕ್ ಧರಿಸಿ ಮಹಿಳೆಯ ಮನೆಗೆ ನುಗ್ಗಿ ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ. ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.ಗುಂಡು ಹಾರಿಸಿದ ಶಬ್ದ ಕೇಳಿ ಸ್ಥಳೀಯರು ಬಂದಿದ್ದಾರೆ. ಈ ವೇಳೆ ಇಬ್ಬರು ಬಂದೂಕುಧಾರಿಗಳನ್ನು ಬೆನ್ನಟ್ಟಿ ಬೈಕ್‍ನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಪೊಲೀಸರು ಬೈಕ್‍ನ್ನು ವಶಕ್ಕೆ ಪಡೆದಿದ್ದು, ಅದರಲ್ಲಿ ನಂಬರ್ ಪ್ಲೇಟ್ ಇಲ್ಲ ಎಂದು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು (Police) ತನಿಖೆ ಆರಂಭಿಸಿದ್ದು, ಆರೋಪಿಗಳಿಗೆ ಬಲೆ ಬೀಸಿದ್ದಾರೆ
