Connect with us

    BANTWAL

    ಭಿನ್ನ ಕೋಮಿನ ಯುವತಿಯರೊಂದಿಗೆ ಸಿಕ್ಕಿ ಬಿದ್ದ ಯುವಕ- ಪೊಲೀಸರಿಗೊಪ್ಪಿಸಿದ ಸ್ಥಳೀಯರು

    ವಿಟ್ಲ, ಸೆಪ್ಟೆಂಬರ್ 20: ಭಿನ್ನಕೋಮಿನ ಯುವತಿಯರೊಂದಿಗಿದ್ದ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ವಿಟ್ಲದ ಕುಡ್ತಮುಗೇರು ಸಮೀಪದ ಪಡಾರು ಬೆಳ್ಪಾದೆ ಎಂಬಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕನೋರ್ವ ಇರುವ ಬಗ್ಗೆ ಮಾಹಿತಿ ಅರಿತ ಸಾರ್ವಜನಿಕರು ಸ್ಥಳಕ್ಕೆ ತೆರಳಿ ಅವರನ್ನು ವಿಚಾರಣೆ ನಡೆಸಿದ್ದಾರೆ.

    ಯುವತಿಯರನ್ನು ಯುವಕ ಕೆಲಸ ಕೊಡಿಸುವ ಆಮಿಷವೊಡ್ಡಿ ಇಲ್ಲಿಗೆ ಕರೆತಂದಿದ್ದಾಗಿ ತಿಳಿದುಬಂದಿದೆ. ಅವರೆಲ್ಲರೂ ಕೇರಳ ಮೂಲದವರು ಎನ್ನಲಾಗುತ್ತಿದೆ. ಸಾರ್ವಜನಿಕರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

    Share Information
    Advertisement
    Click to comment

    You must be logged in to post a comment Login

    Leave a Reply