Connect with us

    DAKSHINA KANNADA

    ಸುರತ್ಕಲ್ ನ ಮಂಗಳಪೇಟೆಯಲ್ಲಿ ಯುವಕನ ಮೇಲೆ ಮಾರಕಾಯುಧಗಳಿಂದ ದಾಳಿ

    ಮಂಗಳೂರು ಜುಲೈ 28: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ತಲವಾರ್ ದಾಳಿ ನಡೆಸಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.

    ಮಂಗಳ ಪೇಟೆಯ ಮಹಮ್ಮದ್ ಫಾಝಿಲ್ ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ ವಾಝಿಯ ಮೇಲೆ ಅಂಗಡಿಯ ಎದುರಿನ ಜಗಲಿಯಲ್ಲೇ ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದರು ಸಾಧ್ಯವಾಗಲಿಲ್ಲ.

    ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವ ವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ವಾಝಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *