LATEST NEWS
SSLC ಪರೀಕ್ಷೆ ಬರೆಯಲು ಆಧಾರ್ ಕಡ್ಡಾಯವಲ್ಲ : ಹೈಕೋರ್ಟ್ ಆದೇಶ
ಬೆಂಗಳೂರು,ಡಿಸೆಂಬರ್ 16 : ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮುಂದಿನ ವರ್ಷ ಮಾರ್ಚ್ 23ರಿಂದ ಏಪ್ರಿಲ್ 6ರವರೆಗೆ ನಡೆಯಲಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಆಧಾರ್ ಸಂಖ್ಯೆ ಕಡ್ಡಾಯವಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. 

ಮುಂದಿನ ವರ್ಷ ಏಪ್ರಿಲ್ ನಲ್ಲಿ ನಡೆಯುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆಯನ್ನು ಕೂಡ ನೀಡುವಂತೆ ರಾಜ್ಯ ಪ್ರೌಢ ಶಿಕ್ಷಣ ಇಲಾಖೆ ಕಡ್ಡಾಯ ಮಾಡಿತ್ತು.
ಇದನ್ನು ವಿರೋಧಿಸಿ ಕೆಲವು ವಿದ್ಯಾರ್ಥಿಗಳು ರಾಜ್ಯ ಉಚ್ಚ ನ್ಯಾಯಾಲಕ್ಕೆ ಮೊರೆ ಹೋಗಿದ್ದರು.
ಇದೀಗ ಹೈಕೋರ್ಟ್ ವಿದ್ಯಾರ್ಥಿಗಳ ಪರವಾಗಿ ತೀರ್ಪು ನೀಡಿದೆ.
ಈ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗೆ ಆಧಾರ್ ಸಂಖ್ಯೆ ಕಡ್ಡಾಯ ಎಂಬ ಷರತ್ತನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ತೆಗೆದುಹಾಕಿದೆ.
ಈ ಬಗ್ಗೆ ಪ್ರೌಢ ಶಿಕ್ಷಣ ಮಂಡಳಿಯನ್ನು ಸಂಪರ್ಕಿಸಿದಾಗ, ಅಧಿಕಾರಿಗಳು ಸುದ್ದಿಯನ್ನು ಖಚಿತಪಡಿಸಿದ್ದಾರೆ.
ಎಸ್ಎಸ್ ಎಲ್ ಸಿ ಪರೀಕ್ಷೆ ಬರೆಯಲು ಪ್ರವೇಶ ಪತ್ರಕ್ಕೆ ಆಧಾರ್ ಸಂಖ್ಯೆ ಕಡ್ಡಾಯವಲ್ಲ ಎಂದು ಅವರು ತಿಳಿಸಿದ್ದಾರೆ.
Facebook Comments
You may like
-
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
-
4ನೇ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ದ ರೋಚಕ ಗೆಲವು – ಸರಣಿ ಗೆದ್ದ ಭಾರತ
-
ಜನವರಿ 16 ರಿಂದ ಕೊರೊನಾ ಲಸಿಕೆ ವಿತರಣೆ ಆರಂಭ
-
ಪಾಕ್ ಮಹಿಳೆ ಭಾರತದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ!
-
ಆಸ್ಟ್ರೇಲಿಯಾ ವಿರುದ್ದ 8 ವಿಕೆಟ್ಗಳ ಜಯ ಸಾಧಿಸಿದ ಭಾರತ
-
ಕೃಷಿ ಮಸೂದೆಯನ್ನು ಹಿಂಪಡೆಯದಿದ್ರೆ, ಖೇಲ್ ರತ್ನ ಪ್ರಶಸ್ತಿ ವಾಪಸ್ ಕೊಡುವೆ: ವಿಜೇಂದರ್ ಸಿಂಗ್
Click to comment
You must be logged in to post a comment Login