LATEST NEWS
ಬಂಟ್ವಾಳ ಅಬ್ದುಲ್ ರಹಿಮಾನ್ ಹ*ತ್ಯೆ ಪ್ರಕರಣ – ಮೂವರು ಅರೆಸ್ಟ್

ಬಂಟ್ವಾಳ ಮೇ 29: ಬಂಟ್ವಾಳ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದೀಪಕ್(21), ಅಮ್ಮುಂಜೆ ಗ್ರಾಮದವರಾದ ಪೃಥ್ವಿರಾಜ್(21) ಮತ್ತು ಚಿಂತನ್(19) ಎಂದು ಗುರುತಿಸಲಾಗಿದೆ.
ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯವು ಪ್ರಗತಿಯಲ್ಲಿದೆ ಎಂದು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ 191[1], 191[2], 191[3], 118[1]. 118 [2], 109, 103(3), 190 ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
