ಬೆಳ್ತಂಗಡಿ ಜೂನ್ 03: ಬಂಟ್ವಾಳದ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ ಮೇ 27ರಂದು ಸಂಜೆ ನಡೆದ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಬೆಳ್ತಂಗಡಿಯ 4 ಸ್ಥಳಗಳಿಗೆ ಸೋಮವಾರ ಸಂಜೆ ಕರೆತಂದು ಮಹಜರು ನಡೆಸಿದರು.


ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್(21) ಮತ್ತು ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ(27) ಎಂಬವರನ್ನು ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಜೂ.2 ರಂದು ಗುರುವಾಯನಕೆರೆಯ ಅಂಗಡಿ, ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಅಂಗಡಿ, ಬೆಳ್ತಂಗಡಿ ಮೂರು ಮಾರ್ಗದ ಬಳಿ, ಉಜಿರೆಯ ನಿಡಿಗಲ್ ನದಿಯ ಬಳಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

Share Information