LATEST NEWS
ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸದೇ ಇರಲು ನಿರ್ಧಾರ – ಮಾಜಿ ಸಚಿವ ಅಭಯ್ ಚಂದ್ರ ಜೈನ್

ಮಂಗಳೂರು, ಜುಲೈ 2: ಮುಂದಿನ ಚುನಾವಣೆಯಲ್ಲಿ ಯವಕರಿಗೆ ಅವಕಾಶ ನೀಡಬೇಕಾದ ಅಗತ್ಯ ಇದ್ದು ಈ ಹಿನ್ನಲೆ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಸ್ವಯಂ ಆಗಿ ನಿರ್ಧರಿಸಿದ್ದೆನೆ ಎಂದು ಮಾಜಿ ಸಚಿವ ಅಭಯ್ ಚಂದ್ರ ಜೈನ್ ಅಭಿಪ್ರಾಯಪಟ್ಟಿದ್ದಾರೆ.,
ಮಂಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಯುವಕರಿಗೆ ಅವಕಾಶ ನೀಡುವುದು ಅತೀ ಅಗತ್ಯವಾಗಿದೆ ಅವರು ಅಭಿಪ್ರಾಯಪಟ್ಟರು. ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ನಾನು ಯುವಕರಿಗೆ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿದ್ದೆ. ಆದರೂ ನಾನು ಸ್ಪರ್ಧಿಸಬೇಕಾಯಿತು. ಕೊನೆಗೆ ಸೋಲಬೇಕಾಯಿತು.

ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಯುವಕರಿಗೆ ಸ್ಥಾನ ನೀಡುವುದು ಇಂದಿನ ರಾಜಕೀಯದ ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ನಾನು ಈಗಾಗಲೇ ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಸ್ವಯಂ ಆಗಿ ನಿರ್ಧರಿಸಿ, ಯುವಕರಿಗೆ ಸ್ಥಾನ ನೀಡಿ ಗೆಲ್ಲಿಸಲು ನಾನು ನಿರ್ಧರಿಸಿದ್ದೇನೆ ಎಂದರು.