LATEST NEWS
ಪುಲ್ವಾಮಾದಲ್ಲಿ ಸುಮಾರು 25 ರಿಂದ 30 ಕೆ.ಜಿ IED ಸ್ಫೋಟಕ ವಶ
ಶ್ರೀನಗರ, ಆಗಸ್ಟ್ 10: ಸ್ವಾತಂತ್ರ ದಿನಾಚರಣೆಗೂ ಕೆಲ ದಿನಗಳ ಮೊದಲು ಪುಲ್ವಾಮಾದ ತಹಾಬ್ ಕ್ರಾಸಿಂಗ್ ಬಳಿ ಸುಮಾರು 25 ರಿಂದ 30 ಕೆಜಿ ತೂಕದ ಸುಧಾರಿತ ಸ್ಫೋಟಕ (IED )ವನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾಗಿದೆ.
ನಿರ್ದಿಷ್ಟ ಮಾಹಿತಿ ಆಧರಿಸಿ ನಡೆದ ಪೊಲೀಸರ ದಾಳಿ ವೇಳೆ ದೊಡ್ಡ ದುರಂತವನ್ನು ತಪ್ಪಿಸಲಾಗಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಈ ಮಧ್ಯೆ, ಬುದ್ಗಾಮ್‌ನ ವಾಟರ್‌ಹೈಲ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯುತ್ತಿದೆ.
ಕಾಶ್ಮೀರಿ ಪಂಡಿತರಾದ ರಾಹುಲ್ ಭಟ್ ಮತ್ತು ಅಮರೀನ್ ಭಟ್ ಸೇರಿದಂತೆ ಹಲವಾರು ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಲತೀಫ್ ರಾಥರ್ ಸೇರಿದಂತೆ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತಯಬಾಗೆ ಸೇರಿದ ಮೂವರು ಭಯೋತ್ಪಾದಕರನ್ನು ಬಂಧಿಸಲಾಗಿದೆ.
J&K | An IED weighing approx 25 to 30 Kgs recovered near Tahab Crossing on Circular road in Pulwama by Police and security forces. A major tragedy has been averted by specific input generated by Pulwama Police: ADGP Kashmir Vijay Kumar pic.twitter.com/KHD5565jKY
— ANI (@ANI) August 10, 2022
ಉಧಮ್‌ಪುರ-ಕತ್ರಾ ರೈಲ್ವೆ ಹಳಿಗಳ ಉದ್ದಕ್ಕೂ ಮತ್ತು ಉಧಮ್‌ಪುರ ರೈಲು ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸ್ವಾತಂತ್ರ್ಯ ದಿನದ ಮುನ್ನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ವಿಶೇಷ ಶ್ವಾನ ಪಡೆ, ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಮತ್ತು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಯಾಣಿಕರ ತಪಾಸಣೆ ಮಾಡಲಾಗುತ್ತಿದೆ.