LATEST NEWS
ಉಪ್ಪಳದ ಯುವಕನ ಮೇಲಿನ ಹಲ್ಲೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ

ಉಪ್ಪಳದ ಯುವಕನ ಮೇಲಿನ ಹಲ್ಲೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ
ಮಂಗಳೂರು ಅಕ್ಟೋಬರ್ 12: ಕಾಸರಗೊಡಿನ ಉಪ್ಪಳದ ಯುವಕ ಪ್ರಣವ್ ಶೆಟ್ಟಿ ಮೇಲಿನ ಹಲ್ಲೆಯನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೇರಿದ ನೂರಾರು ಎಬಿವಿಪಿ ಕಾರ್ಯಕರ್ತರು ಪ್ರಣವ್ ಶೆಟ್ಟಿ ಮೇಲಿನ ಹಲ್ಲೆ ಖಂಡಿಸಿ ನ್ಯಾಯಕ್ಕಾಗಿ ಆಗ್ರಹಿಸಿದರು.

ಈ ಸಂದರ್ಭ ಮಾತಾಡಿದ ಎಬಿವಿಪಿ ಮಂಗಳೂರು ವಿಭಾಗ ಪ್ರಮುಖ ಕೇಶವ ಬಂಗೇರ, ಪ್ರಣವ್ ಮೇಲಿನ ಹಲ್ಲೆ ಖಂಡನೀಯ. ಕಳೆದ ಕೆಲವು ವರುಷಗಳಿಂದ ಇಂತಹ ಹಲ್ಲೆಗಳು ನಡೆಯುತ್ತಲೇ ಇದೆ. ಈ ರೀತಿಯಾಗಿ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಹಲ್ಲೆ ನಡೆಸುವವರನ್ನು ಬಂಧಿಸಿ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.