Connect with us

    LATEST NEWS

    ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ದಾಳಿ

    ಉಡುಪಿ ಜನವರಿ 13: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ.

    ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಗುರುಪ್ರಸಾದ್, ಪ್ರಾಧಿಕಾರ ಅಧಿಕಾರಿಗಳಾದ ನಯಿಮಾ ಸಯೀದ್ ಮತ್ತು ಪ್ರಸಾದ್‍ನನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕರೊಬ್ಬರಿಂದ 2.50 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲೆಯ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ದಾಳಿ ಮಾಡಿ ಇವರನ್ನು ಬಂಧಿಸಿದ್ದಾರೆ.

    ನಗರದ ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಎಸ್‍ಪಿ ಸೈಮನ್, ಡಿವೈಎಸ್‍ಪಿ ಮಂಜುನಾಥ್ ಕವರಿ ನೇತೃತ್ವದಲ್ಲಿ ಎಸಿಬಿ ಎಸ್‍ಐ ಸತೀಶ್, ರಫೀಕ್ ಎಂ. ದಾಳಿ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply