LATEST NEWS
ಉದ್ಯಾವರ – ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗೃಹ ರಕ್ಷಕದಳದ ಸಿಬ್ಬಂದಿ ಆಸ್ಪತ್ರೆಯಲ್ಲಿ ಸಾವು

ಉಡುಪಿ ಜೂನ್ 30: ಇಂದು ಮುಂಜಾನೆ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಕಾರು ಮತ್ತು ಟ್ಯಾಂಕರ್ ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗೃಹರಕ್ಷಕದಳದ ಸಿಬ್ಬಂದಿ ರಾಕೇಶ್(27) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ರಾಕೇಶ್ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಇಂದು ಮುಂಜಾನೆ 5:30ರ ಸುಮಾರಿಗೆ ಮುಲ್ಕಿಯಿಂದ ತನ್ನ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಎದುರು ಚಲಿಸುತ್ತಿದ್ದ ಟ್ಯಾಂಕರ್ ಹಿಂಭಾಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು.

ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.