Connect with us

DAKSHINA KANNADA

ನೆಲ್ಯಾಡಿಯಲ್ಲಿ ಬಸ್ ಮತ್ತು ಲಾರಿ ನಡುವೆ ಭೀಕರ ಅಫಘಾತ: ಬೆಂಕಿ ಕೆನ್ನಾಲಿಗೆಗೆ ಲಾರಿ ಚಾಲಕ ಸಜೀವ ದಹನ

ಕಡಬ, ಮಾರ್ಚ್ 25: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರ ನೆಲ್ಯಾಡಿ ಪ್ರದೇಶದಲ್ಲಿ ಬಸ್ ಮತ್ತು ಲಾರಿ ನಡುವೆ ಭೀಕರ ಅಫಘಾತ ಸಂಭವಿಸಿದೆ.

ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ನಿನ್ನೆ ತಡರಾತ್ರಿ ಈ ಅಪಘಾತ ನಡೆದಿದೆ . ಮಂಗಳೂರಿನಿಂದ- ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಹಾಗು ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿರುವ ಗೂಡ್ಸ್ ಲಾರಿ ನೆಲ್ಯಾಡಿ ಬಳಿ ಪರಸ್ಪರ ಡಿಕ್ಕಿ ಹೊಡೆದ ತೀವ್ರತೆಗೆ ಬೆಂಕಿ ಹತ್ತಿಕೊಂಡಿದೆ.

ಬೆಂಕಿ ಆವರಿಸುತ್ತಲೇ ಬಸ್ ನಿಂದ ಕೆಳಗಿಳಿದು ಪ್ರಯಾಣಿಕರು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ – ಲಾರಿ ಗಳೆರಡೂ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಲಾರಿಯಿಂದ ಚಾಲಕ ಹೊರಬರಲಾರದೆ ಸಜೀವ ದಹನವಾಗಿದ್ದಾರೆ. ಈ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Video:

Share Information
Continue Reading
Advertisement
Click to comment

Leave a Reply

Your email address will not be published. Required fields are marked *