Connect with us

    BELTHANGADI

    ಬೆಳ್ತಂಗಡಿ – ಚಾರ್ಮಾಡಿ ಘಾಟ್ ಬಳಿ ಕೆಎಸ್ಆರ್ ಟಿಸಿ ಬಸ್ – ಕಾರು ಅಪಘಾತ

    ಬೆಳ್ತಂಗಡಿ ಎಪ್ರಿಲ್ 16: ಸರಕಾರಿ ಬಸ್ ಹಾಗೂ ಕಾರಿನ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ನಡೆದಿದೆ.


    ಗಾಯಗೊಂಡವರು ಹುಬ್ಬಳ್ಳಿ ಮೂಲದವರು ಎಂದು ಹೇಳಲಾಗಿದ್ದು. ಚಾಲಕ ಪ್ರತೀಕ್(30),ರಾಜೇಶ್ ಬೆಳ್ಳಿವರಿ (44) ಸ್ವಂತಿಕಾ ಬೆಳ್ಳಿವರಿ(35) ಎಂದು ಗುರುತಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಜೆ ಇದ್ದ ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಇತರ ದೇವಸ್ಥಾನಗಳಿಗೆ ಹೋಗಿ ದರ್ಶನ ಮಾಡಿ ವಾಪಸ್ ಹುಬ್ಬಳಿ ಕಡೆ ಹೋಗುತ್ತಿದ್ದಾಗ ಚಾರ್ಮಾಡಿ ಗ್ರಾಮದ ಗೋಳಿಕಟ್ಟೆಯಲ್ಲಿ ಮೂಡಿಗೆರೆಯಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಸರಕಾರಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರು ಸಂಪೂರ್ಣ ಜಖಂಗೊಂಡಿದ್ದು ,ಬಸ್ ಚರಂಡಿಗೆ ಹೋಗಿದೆ,


    ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply