DAKSHINA KANNADA
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು – ನಿಡ್ಪಳ್ಳಿ ಗ್ರಾಮಪಂಚಾಯತ್ ಸದಸ್ಯ ಸಾವು

ಪುತ್ತೂರು ಫೆಬ್ರವರಿ 15: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಫೆಬ್ರವರಿ 14 ರಂದು ನಡೆದಿದೆ.
ಮೃತಪಟ್ಟವರನ್ನು ಮೃತಪಟ್ಟವರನ್ನು ನಿಡ್ಪಳ್ಳಿ ಗ್ರಾಮಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಮುರಳೀಧರ್ ಭಟ್ ಎಂದು ಗುರುತಿಸಲಾಗಿದೆ. ಇವರ ಕಾರು ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಎರಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ತೋಟಕ್ಕೆ ಉರುಳಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಟ್ಟಂಪಾಡಿಯ ದಿಲೀಪ್ ಕುಮಾರ್‌ರಾವ್, ಶಶಿಕುಮಾರ್, ನವನೀತ್ ಅವರು ಕಾರಿನಲ್ಲಿದ್ದರು ಎಂದು ತಿಳಿದುಬಂದಿದೆ.
