Connect with us

DAKSHINA KANNADA

ಪೊಲೀಸ್ ತಪಾಸಣೆ ವೇಳೆ ದಾಖಲೆ ತರಲು ಹೋದಾಗ ಗೂಡ್ಸ್ ಟೆಂಪೊ ಡಿಕ್ಕಿ..‌ದ್ವಿಚಕ್ರ ಸವಾರ ಸಾವು…ಉದ್ರಿಕ್ತರಿಂದ ಪೊಲೀಸ್ ಶೆಡ್ ಧ್ವಂಸ

ಪುತ್ತೂರು ಜೂನ್ 29: ಲಾಕ್ ಡೌನ್ ಹಿನ್ನಲೆ ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿದ್ದು, ಘಟನೆ ಹಿನ್ನಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಜನರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.


ಮೃತ ಸವಾರನನ್ನು ಆತೂರು ಬೈಲು ನಿವಾಸಿ ಹಾರಿಸ್(33) ಎಂದು ಗುರುತಿಸಲಾಗಿದೆ.  ಹ್ಯಾರಿಸ್ ತನ್ನ ಪತ್ನಿ ನಾಸಿರಾರೊಂದಿಗೆ ದ್ವಿಚಕ್ರ ವಾಹನದಲ್ಲಿ ರಾಮಕುಂಜದಿಂದ ಆತೂರು ಕಡೆಗೆ ಸಾಗುತ್ತಿದ್ದರು. ಈ ವೇಳೆ ವಾಹನಗಳ ದಾಖಲೆ ಪರಿಶೀಲನೆಯಲ್ಲಿ ನಿರತರಾಗಿದ್ದ ಕಡಬ ಎಸ್.ಐ. ರುಕ್ಮ ನಾಯ್ಕ್ ಇವರ ವಾಹನ ತಡೆದಿದ್ದಾರೆ.

ಹ್ಯಾರಿಸ್ ದಾಖಲೆಯನ್ನು ಪೊಲೀಸರಿಗೆ ತೋರಿಸಿ ಮತ್ತೆ ದ್ವಿಚಕ್ರ ವಾಹನದ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಂತೆ ಟಾಟಾಏಸ್ ವಾಹನವೊಂದು ಅವರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಹ್ಯಾರಿಸ್‌ ಅವರನ್ನು ಎಸ್.ಐ. ತನ್ನ ಪೊಲೀಸ್ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಲಾಕ್‌ಡೌನ್ ಸಂದರ್ಭದಲ್ಲಿ ಊರಿಗೆ ಬಂದಿದ್ದರು ಎನ್ನಲಾಗಿದೆ. ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ


ಸ್ಥಳದಲ್ಲಿ ನೂರಾರು ಜನ ಸೇರಿದ್ದು,ಪೋಲೀಸ್ ಚೆಕ್ ಪಾಯಿಂಟ್ ಧ್ವಸಂ ಮಾಡಿದ್ದಾರೆ. ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು,ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಬಳಿಕ ನೂರಾರು ಮಂದಿ ರಸ್ತೆಯಲ್ಲಿ ಕುಳಿತು ವಾಹನ ಸಂಚಾರವನ್ನು ತಡೆದು ಧರಣಿ ನಡೆಸಲು ಮುಂದಾದರು. ಅಷ್ಟೊತ್ತಿಗಾಗಲೇ ಸ್ಥಳಕ್ಕೆ ಕಡಬ, ಉಪ್ಪಿನಂಗಡಿ, ಪುತ್ತೂರಿನ ಠಾಣೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಯಿತು. ಆಕ್ರೋಶಿತ ಕಿಡಿಗೇಡಿಗಳ ಗುಂಪು ಪೊಲೀಸರ ಮೇಲೂ ಹಲ್ಲೆಗೆ ಮುಂದಾಯಿತು. ಉಪಾಯವಿಲ್ಲದೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು. ಘಟನೆ ಹಿನ್ನೆಲೆಯಲ್ಲಿ ಆತೂರು ಪರಿಸರದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಸರ್ಕಲ್‌ ಇನ್ಸ್‌ಪೆಕ್ಟರ್‌ ಉಮೇಶ್‌ ಉಪ್ಪಳಿಕೆ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಘಟನೆ ಸಂಬಂಧ ಟಾಟಾ ಏಸ್‌ ವಾಹನದ ಚಾಲಕ ಮಹಮ್ಮದ್‌ ಶರೀಫ್‌ ಅವರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಕೊಂಡಿದ್ದಾರೆ. ಶೆಡ್‌ ಧ್ವಂಸಗೊಳಿಸಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ವ್ಯಕ್ತಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದು, ಹತ್ತಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *