LATEST NEWS
ಲಾರಿ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಮೃತ್ಯು

ಉಡುಪಿ ನವೆಂಬರ್ 23: ಸ್ಕೂಟರ್ ಸವಾರನೋರ್ವ ಲಾರಿ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ.
ಉಚ್ಚಿಲ ಪೇಟೆಯಿಂದ ಪಡುಬಿದ್ರಿ ಕಡೆಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂದರ್ಭ ಬ್ಯಾಲೆನ್ಸ್ ತಪ್ಪಿ ಮಂಗಳೂರಿನತ್ತ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ತೆರಳುತ್ತಿದ್ದ ಲಾರಿಯ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಮೃತರನ್ನು ಹೆಜಮಾಡಿ ಅಡ್ಕ ಹೌಸ್ ನಿವಾಸಿ ವಾಸು ಬಿ ಕೋಟ್ಯಾನ್ (65) ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading