LATEST NEWS
ಹಳೆಯಂಗಡಿ ಬಳಿ ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು..!
ಮಂಗಳೂರು ಜನವರಿ 28: ಮಂಗಳೂರು ಹೊರ ವಲಯದ ಹಳೆಯಂಗಡಿ ತೋಕೂರು ಬಳಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹಳೆಯಂಗಡಿಯ ತೋಕೂರು ಸರಕಾರಿ ಶಾಲೆಯ ಬಳಿ ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಕಿನ್ನಿಗೋಳಿ ಕಡೆ ಚಲಿಸುವ ಸರ್ವಿಸ್ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿನಿಂದ ಬರುತ್ತಿದ್ದ ಇನ್ನೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಕ್ರಕ್ಕೆ ಸಿಲುಕಿದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.