LATEST NEWS
ಹೊಸದುರ್ಗ ಮರಕ್ಕೆ ಡಿಕ್ಕಿ ಹೊಡೆದ ಕಾರು – ಕುಂದಾಪುರ ಮೂಲದ ಮೂವರ ಸಾವು

ಚಿತ್ರದುರ್ಗ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕುಂದಾಪುರ ಮೂಲದ 5 ವರ್ಷದ ಕಂದಮ್ಮ ಸೇರಿ ಮೂವರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ.
ಮೃತರನ್ನು ಗೀತಾ(32), ಶಾರದಾ (60) ಹಾಗೂ ಧೃತಿ (5) ಎಂದು ಗುರುತಿಸಲಾಗಿದ್ದು, ಇವರು ಕುಂದಾಪುರ ಮೂಲದವರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ 5 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
