Connect with us

    LATEST NEWS

    ಕುಂದಾಪುರ – ಬಸ್ ನಿಂದ ಬಿದ್ದು ಚಕ್ರದಡಿ ಸಿಲುಕಿ ವಿಧ್ಯಾರ್ಥಿ ಸಾವು

    ಕುಂದಾಪುರ ಜನವರಿ 28: ಖಾಸಗಿ ಬಸ್ ನಿಂದ ಇಳಿಯುವಾಗ ಆಯತಪ್ಪಿ ಬಿದ್ದ ವಿಧ್ಯಾರ್ಥಿ ಮೇಲೆ ಬಸ್ ಚಲಿಸಿದ ಪರಿಣಾಮ ವಿಧ್ಯಾರ್ಥಿ ಚಕ್ರದಡಿ ಸಿಲುಕಿ ಧಾರುಣವಾಗಿ ಸಾವನಪ್ಪಿದ ಘಟನೆ ಹೆಮ್ಮಾಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
    ಮೃತ ವಿಧ್ಯಾರ್ಥಿಯನ್ನು ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಎಂದು ಗುರುತಿಸಲಾಗಿದೆ.


    ಖಾಸಗಿ ಬಸ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಸಂದೀಪ್ ಬಸ್ ನೊಳಗೆ ಜನ ಹಾಗೂ ವಿದ್ಯಾರ್ಥಿಗಳು ತುಂಬಿದ್ದರಿಂದ ಫೂಟ್ ಬೋರ್ಡ್ ಮೇಲೆ ನಿಂತು ಸಾಗುತ್ತಿದ್ದರು. ಹೆಮ್ಮಾಡಿಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಮತ್ತೆ ಹತ್ತಿಸಿಕೊಳ್ಳಲಾಯಿತು. ಬಸ್ ಮತ್ತೆ ಚಲಿಸಲು ಪ್ರಾರಂಭಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಇಳಿಯದ ಹಿನ್ನೆಲೆ ಮತ್ತೆ ಅವರನ್ನು ಇಳಿಸಲು ಬಸ್ ನಿಲ್ಲಿಸುತ್ತಿದ್ದಾಗ ಸುದೀಪ್ ಹಠಾತ್ತನೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ ಗೆ ಮುಂಭಾಗದಲ್ಲಿ ಮಾತ್ರವೇ ಬಾಗಿಲಿದ್ದ ಕಾರಣ ಮುಂಬದಿಯ ಬಾಗಿಲಲ್ಲಿ ನಿಂತಿದ್ದ ಸುದೀಪ್ ಬಸ್ ನ ಮುಂಬದಿಯ ಚಕ್ರದಡಿಯಲ್ಲಿ ಸಿಲುಕಿದ್ದಾನೆ. ಚಾಲಕ ವಿದ್ಯಾರ್ಥಿಯನ್ನು ಉಳಿಸುವ ಪ್ರಯತ್ನ ನಡೆಸಿದರಾದರೂ ಸೊಂಟದ ಮೇಲೆ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡ ಸುದೀಪ್ ಕೊನೆಯುಸಿರೆಳೆದಿದ್ದಾನೆ.

     

    Share Information
    Advertisement
    Click to comment

    You must be logged in to post a comment Login

    Leave a Reply