KARNATAKA
ನೆಲಮಂಗಲದಲ್ಲಿ ಭೀಕರ ರಸ್ತೆ ಅಪಘಾತ – 8 ತಿಂಗಳ ಗರ್ಭಿಣಿ ಹೊಟ್ಟೆಯಿಂದ ಹೊರ ಬಂದ ಮಗು ವಿಲ ವಿಲ ಒದ್ದಾಡಿ ಸಾವು
ಬೆಂಗಳೂರು ಅಗಸ್ಟ್ 07: ನೆಲಮಂಗಲದಲ್ಲಿ ಬೈಕ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 8 ತಿಂಗಳ ಗರ್ಭಿಣಿ ಸಾವನಪ್ಪಿದ್ದು, ಈ ವೇಳೆ ಆಕೆಯ ಹೊಟ್ಟೆಯಲ್ಲಿದ್ದ ಮಗು ಹೊರಬಂದು ಸಾವನಪ್ಪಿದೆ.
ಮೃತ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ ಸಿಂಚನ (30) ಎಂದು ಗುರುತಿಸಲಾಗಿದೆ. ಪತಿ ಮಂಜುನಾಥ್ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ಘೋರ ದುರಂತ ಸಂಭವಿಸಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ. 8 ತಿಂಗಳ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾರೆ. ಟಿಪ್ಪರ್ ಮೈಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ ಮಗು ಕೂಡ ಹೊರಗೆ ಬಂದು ಅಸುನೀಗಿದೆ.
ಸಿಂಚನಾಗೆ ಬರುವ ಆಗಸ್ಟ್ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್ ನಲ್ಲಿ ದಾಬಸ್ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆ ಸಲ್ಲಿಸಿ ಮರಳಿ ತಮ್ಮೂರು ತೋಟನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಆಗ ಸಿಂಚನಾ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ಸಿಂಚನಾ ಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ 8 ತಿಂಗಳು ಮಗು ಹೊರಗೆ ಬಂದಿದೆ. ನಡು ರಸ್ತೆಯಲ್ಲೇ ಮಗು ವಿಲ ವಿಲ ಒದ್ದಾಡಿ ಮೃತಪಟ್ಟಿದೆ.
You must be logged in to post a comment Login