DAKSHINA KANNADA
ಸ್ಕೂಟರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ – ತಂದೆ ಸಾವು ಮಕ್ಕಳ ಸ್ಥಿತಿ ಗಂಭೀರ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಪ್ಪಿನಂಗಡಿ ಎಪ್ರಿಲ್ 22: ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ್ದು, ಸ್ಕೂಟರ್ ನಲ್ಲಿದ್ದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಕಲ್ಲೇರಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್ (35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಇವರು ತನ್ನೆರಡು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ಇವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮಕ್ಕಳಿಬ್ಬರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login