Connect with us

    LATEST NEWS

    Chhattisgarh – ಭೀಕರ ರಸ್ತೆ ಅಪಘಾತಕ್ಕೆ 4 ಮಕ್ಕಳು ಸೇರಿದಂತೆ 11 ಮಂದಿ ಬಲಿ….!!

    ರಾಯ್‌ಪುರ ಫೆಬ್ರವರಿ 24: ಟ್ರಕ್ ಹಾಗೂ ವ್ಯಾನ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 11 ಮಂದಿ ಸಾವನಪ್ಪಿರುವ ಘಟನೆ ಛತ್ತೀಸ್ ಗಡದ ಬಲೋಡಾ ಬಜಾರ್ – ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


    ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಖಿಲೋರಾ ಗ್ರಾಮದಿಂದ ಅರ್ಜುನಿ ಗ್ರಾಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಸಂಬಂಧಿಕರು ಪಿಕಪ್‌ ವಾಹನದಲ್ಲಿ ಅರ್ಜುನಿಯಿಂದ ತಮ್ಮ ಗ್ರಾಮ ಖಿಲೋರಾಗೆ ಹಿಂತಿರುಗುತ್ತಿದ್ದರು. ಈ ಮಧ್ಯೆ, ರಾತ್ರಿ 12 ಗಂಟೆ ಸುಮಾರಿಗೆ ಖಮಾರಿಯಾದ ಡಿಪಿಡಬ್ಲ್ಯುಎಸ್ ಶಾಲೆಯ ಬಳಿ ವೇಗವಾಗಿ ಬಂದ ಟ್ರಕ್‌ ಮತ್ತು ಪಿಕಪ್ ವಾಹನದ ಮಧ್ಯೆ ಡಿಕ್ಕಿ ಸಂಭವಿಸಿದೆ.

    ಡಿಕ್ಕಿಯ ರಭಸಕ್ಕೆ ಪಿಕಪ್ ವಾಹನ ಉರುಳಿ ಬಿದ್ದಿತ್ತು. ಅಪಘಾತದಲ್ಲಿ 4 ಮಕ್ಕಳು ಸೇರಿದಂತೆ 11 ಮಂದಿ ದಾರುಣ ಸಾವಾಗಿದೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜಿಲ್ಲಾಸ್ಪತ್ರೆ ಹಾಗೂ ಇತರ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಮೂವರು ಗಾಯಾಳುಗಳನ್ನು ರಾಯ್‌ಪುರಕ್ಕೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಿಕಪ್‌ ವಾಹನದಲ್ಲಿದ್ದ ಎಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಕುಟುಂಬದ . ಅಪಘಾತದ ಬಗ್ಗೆ ಮಾಹಿತಿ ಪಡೆದ ಭಟಪಾರ ಪೊಲೀಸರು ತಡರಾತ್ರಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply