Connect with us

    BELTHANGADI

    ಹುಟ್ಟು ಹಬ್ಬದ ದಿನವೇ ಅಪಘಾತಕ್ಕೆ ಬಲಿಯಾದ ದೀಕ್ಷಿತ್

    ಬೆಳ್ತಂಗಡಿ ಜೂನ್ 21: ಹುಟ್ಟುಹಬ್ಬದ ದಿನವೇ ಯುವಕನೋಬ್ಬ ಅಪಘಾತಕ್ಕೆ ಬಲಿಯಾದ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭಿಸಿದೆ. ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.


    ಮೃತ ಯುವಕ ಓಡೀಲು ನಿವಾಸಿಯಾಗಿರುವ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು ಈ ಹಿನ್ನಲೆಯಲ್ಲಿ ಬೆಳಿಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ವೇಣೂರು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply