ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು ಮೂರು ಸಾವು

ಉತ್ತರಕನ್ನಡ ನವೆಂಬರ್ 13: ಉತ್ತರಕನ್ನಡ ಹೊನ್ನಾವರ ತಾಲೂಕಿನ ಆರೋಳಿ ಕ್ರಾಸ್​ ಬಳಿ ಕಾರು ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು ಏಳು ಜನರು ಗಂಭೀರ ಗಾಯಗೊಂಡಿದ್ದಾರೆ . ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ಫಾತಿಮಾ (65). ರುಬಿಯಾ (45), ಚಾಬುಸಾಬ್​ ಎಂದು ಗುರುತ್ತಿಸಲಾಗಿದೆ. ಉಳಿದಂತೆ ಇತರ ಏಳು ಜನ ಗಾಯಗೊಂಡಿದ್ದಾರೆ. ಇವರನ್ನೆಲ್ಲ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಗ್ರಾಮದವರು ಎಂದು ತಿಳಿದುಬಂದಿದೆ.

ಗೋವಾದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್​ ಊರಿಗೆ ಮರಳುತಿದ್ದಾಗ ಈ ವೇಳೆ ದುರ್ಘಟನೆ ಸಂಭವಿಸಿದೆ ಗಾಯಗೊಂಡವರನ್ನು ಹೊನ್ನಾವರ ಆಸ್ಪತ್ರೆಯಲ್ಲಿ ಪ್ರಾರ್ಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

comments