Connect with us

    LATEST NEWS

    ಉದ್ಯಾವರ ಸೇತುವೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್

    ಉದ್ಯಾವರ ಸೇತುವೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್

    ಉಡುಪಿ ಮೇ.29: ಕೆಎಸ್ ಆರ್ ಟಿ ಸಿ ಬಸ್ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದೆ.

    ಮಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಯೊಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಚಾಲಕನ ಅಜಾಗರೂಕತೆಯ ಚಾಲನೆ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply