Connect with us

LATEST NEWS

ಮಂಗಳೂರು – ಬಿಎಂಡಬ್ಲ್ಯೂ ಕಾರು ಅಪಘಾತ ಪ್ರಕರಣ- ಮಹಿಳೆ ಬ್ರೈನ್ ಡೆಡ್ …!!

ಮಂಗಳೂರು ಎಪ್ರಿಲ್ 23: ಎರಡು ವಾರಗಳ ಹಿಂದೆ ಬಿಎಂಡಬ್ಲ್ಯೂ ಕಾರು ರಸ್ತೆ ಡಿವೈಡರ್ ದಾಟಿ ರಸ್ತೆ ಇನ್ನೊಂದು ಬದಿಯಲ್ಲಿ ಸಂಚರಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಬ್ರೈನ್ ಡೆಡ್ ಆಗಿದ್ದು, ಅಂಗಾಂಗ ದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದಾರೆ.


ಎರಡು ವಾರಗಳ ಹಿಂದೆ ಮಧ್ಯಾಹ್ನ 1.20ರ ಸುಮಾರಿಗೆ ಬಲ್ಲಾಳ್‌ ಭಾಗ್ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿತ್ತು. ಬಿಎಂಡಬ್ಲ್ಯೂ ಕಾರು ಚಾಲಕನ ವೇಗದ ಚಾಲನೆಗೆ ಕಾರು ಡಿವೈಡರ್ ಮೇಲಿಂದ ಹಾರಿ ಸ್ಕೂಟಿಯಲ್ಲಿ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ.

ಅಪಘಾತದದಲ್ಲಿ ಎರಡು ಕಾರುಗಳ ಮಧ್ಯೆ ಸಿಲುಕಿದ ಸ್ಕೂಟರ್ ಸವಾರೆ 47ರ ಹರೆಯ ಪ್ರೀತಿ ಮನೋಜ್ ಎಂಬುವವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ನಗರ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಮೆದುಳು ನಿಷ್ಕ್ರೀಯಗೊಂಡ ಹಿನ್ನಲೆಯಲ್ಲಿ ಪ್ರೀತಿ ಅವರ ಅಂಗಾಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply