Connect with us

    LATEST NEWS

    ಮಹಿಳಾ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ಆರೋಪ – ಆಸಿಫ್ ಆಪತ್ಪಾಂಧವ ಅರೆಸ್ಟ್

    ಮಂಗಳೂರು ಅಕ್ಟೋಬರ್ 12 : ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದ್ದು, ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ.


    ಬುಧವಾರ ಆಸಿಫ್ ಆಪತ್ಪಾಂಧವ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆ ತಂದಿದ್ದರು. ಈ ವೇಳೆ ಅಂಬ್ಯುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗೆ ಕರೆದುಕೊಂಡು ಹೋಗಿ ಅಡ್ಮಿಷನ್ ಮಾಡುವ ವೇಳೆ ಅಲ್ಲಿದ್ದ ಮಹಿಳಾ ಸೆಕ್ಯುರಿಟಿ ಗಾರ್ಡ್ ಅಂಬ್ಯುಲೆನ್ಸ್ ನ್ನು ಹೊರಗೆ ಒಯ್ಯುವಂತೆ ತಿಳಿಸಿದ್ದಾರೆ.

    ಆದರೆ ಸ್ವಲ್ಪ ಹೊತ್ತಾದರೂ ಆಂಬುಲೆನ್ಸ್ ತೆರವು ಮಾಡದ್ದಕ್ಕೆ ಮಹಿಳಾ ಸಿಬಂದಿ ವಾಹನ ತೆಗೆಯುವಂತೆ ಹೇಳಿದ್ದು, ಆಸಿಫ್ ಮತ್ತು ಮಹಿಳಾ ಸಿಬಂದಿ ನಡುವೆ ಮಾತಿಗೆ ಮಾತಾಗಿತ್ತು. ಈ ವೇಳೆ, ಸಿಬಂದಿಯನ್ನು ದೂಡಿ ಕೈಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಆಸಿಫ್ ಅವರನ್ನು ಕರೆದೊಯ್ದಿದ್ದಾರೆ. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply