Connect with us

    LATEST NEWS

    ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ: ದೃಶ್ಯಂ ಚಿತ್ರದ ಖ್ಯಾತ ನಟ ಅರೆಸ್ಟ್​

    ಕೊಚ್ಚಿ: ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಲಯಾಳಂ ಸಿನಿ ಇಂಡಸ್ಟ್ರಿಯ ಖ್ಯಾತ ನಟನೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

    ಈ ಭಯಾನಕ ಘಟನೆ ನಡೆದಿರುವುದು ಕೇರಳದಲ್ಲಿ. ದೃಶ್ಯಂ ಚಿತ್ರವಲ್ಲದೆ ಹಲವು ಚಿತ್ರಗಳಲ್ಲಿ ಕ್ಯಾರೆಕ್ಟರ್ ರೋಲ್ ಮತ್ತು ವಿಲನ್ ಪಾತ್ರಗಳನ್ನು ನಿರ್ವಹಿಸಿದ್ದ ಮಲಯಾಳಂ ನಟ ಕುಟಿಕಲ್ ಜಯಚಂದ್ರನ್ ಅವರನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಮನೆಯ ಕೌಟುಂಬಿಕ ಕಲಹದ ಲಾಭ ಪಡೆದು ಈ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಉಲ್ಲೇಖಸಿದ್ದಾರೆ.

    ಬಾಲಕಿಯ ಡ್ರೆಸ್ ತುಸು ಹರಿದಿರುವುದುನ್ನು ಮತ್ತು ಧೂಳಿನಿಂದ ಆವರಿಸಿರುವುದನ್ನು ಗಮನಿಸಿದ ಕುಟುಂಬಸ್ಥರು ಏನಾಯಿತು ಎಂದು ವಿಚಾರಿಸಿದಾಗ ನಟ ಜಯಚಂದ್ರನ್​ ದುಷ್ಕೃತ್ಯ ಬೆಳಕಿಗೆ ಬಂದಿದೆ. ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೋಯಿಕ್ಕೋಡ್ ಠಾಣೆಯಲ್ಲಿ ನಟನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆದೇಶದಂತೆ ಪೊಲೀಸರು ಮಗುವಿನ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಈ ಘಟನೆ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದು, ಜಯಚಂದ್ರ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹಲವರು ಆಗ್ರಹಿಸುತ್ತಿದ್ದಾರೆ. ಆದರೆ ಈ ವಿಚಾರವಾಗಿ ಜಯಚಂದ್ರ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ನಟನನ್ನು ಇನ್ನೂ ಬಂಧಿಸಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

    ಪ್ರಕರಣದಲ್ಲಿ ಅಪ್ರಾಪ್ತನೊಬ್ಬನ ಕೈವಾಡವಿರುವುದರಿಂದ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆಂದು ತೋರುತ್ತದೆ. ಜಯಚಂದ್ರ ಅವರು ಮಿಮಿಕ್ರಿ ಕಲಾವಿದರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಂತರ ಅವರು ಜಗತಿ ವರ್ಸಸ್ ಜಗತಿ ಮತ್ತು ಕಾಮಿಡಿ ಟೈಮ್‌ನಂತಹ ಕಾರ್ಯಕ್ರಮಗಳೊಂದಿಗೆ ನಿರೂಪಕರಾದರು. ದೃಶ್ಯದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವುದರ ಜೊತೆಗೆ, ಒರು ಸೆಕೆಂಡ್ ಕ್ಲಾಸ್ ಯಾತ್ರಾ, ಮಿಶಿಮ್, ನಾರದನ್, ಮೈ ಬಾಸ್, ಡಿಟೆಕ್ಟಿವ್ ಮುಂತಾದ ಅನೇಕ ಹಿಟ್ ಚಲನಚಿತ್ರಗಳಲ್ಲಿ ಜಯಚಂದ್ರನ್ ನಟಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply