Connect with us

    KARNATAKA

    ಪತ್ನಿ‌ – ಅತ್ತೆಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ..!

    ಕೌಟುಂಬಿಕ ಕಲಹ ಹಿನ್ನಲೆ ಪತ್ನಿ‌ ಹಾಗೂ ಪತ್ನಿಯ ತಾಯಿಯ ಕೊಲೆ‌ಗೈದಿರುವ ಘಟನೆ ವಿಜಯಪುರ ನಗರದ ನವಬಾಗ್‌ದಲ್ಲಿ ಇಂದು ಸೋಮವಾರ ಬೆಳಗ್ಗೆ ನಡೆದಿದೆ.

    ವಿಜಯಪುರ: ಕೌಟುಂಬಿಕ ಕಲಹ ಹಿನ್ನಲೆ ಪತ್ನಿ‌ ಹಾಗೂ ಪತ್ನಿಯ ತಾಯಿಯ ಕೊಲೆ‌ಗೈದಿರುವ ಘಟನೆ ವಿಜಯಪುರ ನಗರದ ನವಬಾಗ್‌ದಲ್ಲಿ ಇಂದು ಸೋಮವಾರ ಬೆಳಗ್ಗೆ ನಡೆದಿದೆ.

    ರೂಪಾ ಮೇತ್ರಿ (32) ಅವರ ತಾಯಿ ಕಲ್ಲವ್ವ (55) ಕೊಲೆಯಾದವರು ಎಂದು ಗುರುತಿಸಲಾಗಿದೆ.

    ಮಲ್ಲಿಕಾರ್ಜುನ ಮೇತ್ರಿ ಕೊಲೆಗೈದಿರುವ ಆರೋಪಿಯಾಗಿದ್ದು ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

    ಆರೋಪಿಯು ಮಲಗಿದ್ದ ವೇಳೆ ಕಟ್ಟಿಗೆಯಿಂದ ತಲೆಗೆ ಹೊಡೆದು ಪತ್ನಿ ಹಾಗೂ ಅತ್ತೆಯನ್ನು ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.

    ಕೊಲೆಗೈದ ಬಳಿಕ ಗಾಂಧಿಚೌಕ್ ಪೊಲೀಸ್ ಠಾಣೆಗೆ ತೆರಳಿ ಮಲ್ಲಿಕಾರ್ಜುನ ಶರಣಾಗಿದ್ದಾನೆ.

    ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದು ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply