Connect with us

    DAKSHINA KANNADA

    ಕೌಟುಂಬಿಕ ಕಲಹ ಪತಿಯಿಂದ ಪತ್ನಿ, ಪತ್ನಿಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ

    ಪುತ್ತೂರು ಸಪ್ಟೆಂಬರ್ 24: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಇಂದು ನಡೆದಿದೆ.

    ನೆಲ್ಯಾಡಿ ನಿವಾಸಿ ಬಿಜು ಎಂಬಾತ ತನ್ನ ಪತ್ನಿ ಶೈನಿ ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ ಎಂಬವರ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಬಿಜು ಹಾಗೂ ಆತನ ಪತ್ನಿ ಶೈನಿ ನಡುವೆ ಕಲಹ ಏರ್ಪಟಿದ್ದು ಈ ಹಿನ್ನೆಲೆಯಲ್ಲಿ ಶೈನಿ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿರುವ ತನ್ನ ತಂದೆಯ ತಮ್ಮನ ಮನೆಯಲ್ಲಿ ಮಗಳ ಜೊತೆಗೆ ವಾಸವಾಗಿದ್ದರು. ಅಲ್ಲಿಂದ ಶೈನಿಯವರು ತನ್ನ ಚಿಕ್ಕಮ್ಮ ಝಾನ್ಸಿಯವರ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದರು.  ಇಂದು ಬೆಳಿಗ್ಗೆ ಶೈನಿ ಹಾಗೂ ಝಾನ್ಸಿಯವರು ಮನೆಯಿಂದ ಕೆಲಸಕ್ಕೆ ಹೋಗಲೆಂದು ಕಾಲುದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಕಾದು ಕುಳಿತಿದ್ದ ಆರೋಪಿ ಬಿಜು ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ.

    ಸುದ್ದಿ ತಿಳಿಯುತ್ತಲೇ ಶೈನಿಯವರ ಚಿಕ್ಕಪ್ಪ ಏಲಿಯಸ್‌ರವರು ಸ್ಥಳಕ್ಕೆ ಆಗಮಿಸಿದ್ದು ಇಬ್ಬರನ್ನೂ ರಿಕ್ಷಾದಲ್ಲಿ ನೆಲ್ಯಾಡಿಯ ಆಸ್ಪತ್ರೆಯೊಂದಕ್ಕೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ ಹಾಗೂ ದೇಹದಲ್ಲಿ ತೀವ್ರ ಸ್ವರೂಪದ ಸುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *