DAKSHINA KANNADA
ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ಆರೆಸ್ಟ್

ಪುತ್ತೂರು ಸೆಪ್ಟೆಂಬರ್ 25: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಿಜು ಎಂಬವನನ್ನು ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಹೊರಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನೆಲ್ಯಾಡಿ ನಿವಾಸಿ ಬಿಜು ಎಂಬಾತ ತನ್ನ ಪತ್ನಿ ಶೈನಿ ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ ಎಂಬವರ ಮೇಲೆ ಆಸಿಡ್ ದಾಳಿ ನಡೆಸಿದ್ದ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ.ಆರೊಪಿ ಬಿಜು ಎಂಬವ ಪತ್ನಿ ಹಾಗೂ ಚಿಕ್ಕಮ್ಮನನ್ನು ಕೊಲೆ ಮಾಡುವ ಸಲುವಾಗಿ ತಲವಾರು ನೊಂದಿಗೆ ಬಂದಿದ್ದ ಎನ್ನಲಾಗಿದೆ.

ಪರಾರಿಯಾಗುವ ಉದ್ದೇಶದಿಂದ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯಿದ್ದಾಗ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಪುತ್ತೂರು ವೃತ್ತಕಛೇರಿಯ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.