DAKSHINA KANNADA
ಪ್ರೀತಿ ನಿರಾಕರಿಸಿದ್ದಕ್ಕೆ ಆ್ಯಸಿಡ್ ದಾಳಿ ನಡೆಸಿದ ಆರೋಪಿ…ಪ್ರಾಣಾಪಾಯದಿಂದ ಪಾರಾದ ವಿಧ್ಯಾರ್ಥಿನಿಯರು
ಕಡಬ ಮಾರ್ಚ್ 04: ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿ ಅಬಿನ್ ಒನ್ ಸೈಡ್ ಲವ್ ಸ್ಟೋರಿಯ ಈ ದಾಳಿಗೆ ಕಾರಣ ಎಂದು ಹೇಳಲಾಗಿದೆ.
ಆ್ಯಸಿಡ್ ದಾಳಿ ಬಗ್ಗೆ ಮಾಹಿತಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದ ವಿದ್ಯಾರ್ಥಿನಿಯ ಮೇಲೆ ಕೇರಳದ ಮಲಪ್ಪುರಂ ನಿವಾಸಿ ಅಬಿನ್ ಎಂಬಾತ ಆ್ಯಸಿಡ್ ಎರಚಿದ್ದು, ಇದರಿಂದಾಗಿ ಆಕೆಯ ಜೊತೆಗಿದ್ದ ಸಹಪಾಠಿಗಳಾದ ಇತರ ಇಬ್ಬರಿಗೂ ಸುಟ್ಟ ಗಾಯಗಳಾಗಿದ್ದು, ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲೀನಾ ಅವರ ಮುಖಕ್ಕೆ ಗಂಭೀರಗಾಯಗಳಾಗಿದೆ. ಮೇಲ್ನೋಟಕ್ಕೆ ಪ್ರೇಮ ನಿರಾಕರಣೆಯ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರುವುದಾಗಿ ತಿಳಿದು ಬಂದಿದ್ದು, ತನಿಖೆ ಮುಂದುವರಿದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ ಹೇಳಿದರು.
ಆರೋಪಿ ಅಬೀನ್ ಹಾಗೂ ವಿಧ್ಯಾರ್ಥಿನಿ ಕೇರಳದ ಮಲಪ್ಪುರಂ ನಿವಾಸಿಗಳು, ಆ್ಯಸಿಡ್ ದಾಳಿಗೆ ಒಳಗಾದ ವಿಧ್ಯಾರ್ಥಿನಿ ಮನೆ ಆರೋಪಿ ಅಬೀನ್ ಮನೆಯಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿದ್ದು, ಈ ಹಿನ್ನಲೆ ವಿಧ್ಯಾರ್ಥಿನಿಗೆ ಆರೋಪಿಗೆ ಪರಿಚಯವಾಗಿದ್ದರು. ಕಳೆದ ಎರಡು ವರ್ಷಗಳಿಂದ ಆರೋಪಿಗೆ ಹಾಗೂ ವಿಧ್ಯಾರ್ಥಿನಿಗೆ ಸ್ನೇಹ ಇತ್ತು ಎಂದು ಹೇಳಲಾಗಿದೆ. ಆದರೆ ಇತ್ತೀಚೆಗೆ ವಿಧ್ಯಾರ್ಥಿನಿ ಅಬಿನ್ ಪ್ರೇಮವನ್ನು ನಿರಾಕರಿಸಿದ್ದಳು. ಈ ಹಿನ್ನಲೆ ಆರೋಪಿ ಆಸಿಡ್ ದಾಳಿ ನಡೆಸಿದ್ದಾನೆ. ಇದೊಂದು ಪೂರ್ವನಿಯೋಜಿತ ಕೃತ್ಯ ಎಂದು ಕಾಣುತ್ತಿದೆ. ವಿಧ್ಯಾರ್ಥಿನಿಯ ಚಲನವಲನವನ್ನು ಗಮಿನಿಸಿ ಆರೋಪಿ ಕೃತ್ಯ ಎಸಗಿದ್ದಾನೆ. ಅಲ್ಲದೆ ಕಾಲೇಜಿನ ಸಮವಸ್ತ್ರದಲ್ಲೇ ಬಂದು ಆ್ಯಸಿಡ್ ಎರಚಿದ್ದಾನೆ .
ದ್ವಿತೀಯ ಪಿ.ಯು. ಗಣಿತ ಪರೀಕ್ಷೆ ಸೋಮವಾರ ನಿಗದಿಯಾಗಿತ್ತು. ವಿದ್ಯಾರ್ಥಿನಿಯು ಪರೀಕ್ಷೆಗೆ ಹಾಜರಾಗಲು ಬರುವ ವಿಚಾರವನ್ನು ಮೊದಲೇ ತಿಳಿದಿದ್ದ ಆರೋಪಿ ಆ್ಯಸಿಡ್ ಎರಚಲು ಸಿದ್ಧತೆ ಮಾಡಿಕೊಂಡು ಬಂದಿದ್ದ. ಕಾಲೇಜಿನ ಆವರಣಕ್ಕೆ ಬರುವಾಗ ಮಾಸ್ಕ್, ಟೋಪಿ ಧರಿಸಿದ್ದ. ಆತ ಎಲ್ಲಿಂದ ಆ್ಯಸಿಡ್ ತಂದಿದ್ದ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಕಲೆ ಹಾಕಬೇಕಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.