LATEST NEWS
ಆ್ಯಸಿಡ್ ಸಂತ್ರಸ್ತೆ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂಪಾಯಿ ತುರ್ತು ಪರಿಹಾರ
ಆ್ಯಸಿಡ್ ಸಂತ್ರಸ್ತೆ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂಪಾಯಿ ತುರ್ತು ಪರಿಹಾರ
ಮಂಗಳೂರು ಫೆಬ್ರವರಿ 8: ತನ್ನ ಬಾವನಿಂದ ಆ್ಯಸಿಡ್ ದಾಳಿಗೆ ತುತ್ತಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಕಡಬ ತಾಲೂಕಿನ ಕೋಡಿಂಬಾಳ ನಿವಾಸಿ ಸ್ವಪ್ನಾ ರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂಪಾಯಿ ತುರ್ತು ಪರಿಹಾರ ದೊರೆತಿದೆ.
ಜನವರಿ 23 ರಂದು ಸ್ವಪ್ನಾಳ ಭಾವ ಜಯಾನಂದ ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದು, ಆರೋಪಿಯನ್ನು ಪೋಲೀಸರು ಈಗಾಗಲೇ ಬಂಧಿಸಿದ್ದಾರೆ. ಆರೋಪಿ ಸ್ವಪ್ನಾರಿಗೆ ನಿರಂತರ ಲೈಂಗಿಕ ಕಿರುಕುಳ ಹಾಗೂ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕಿರುಕಿಳ ನೀಡುತ್ತಿದ್ದ ಎಂದು ಆರೋಪಿಸಲಾಗಿತ್ತು.