KARNATAKA
ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆಸಿಡ್ ಆರೋಪಿ ನಾಗೇಶ್ ಕಾಲಿಗೆ ಗುಂಡೇಟು….!!

ಬೆಂಗಳೂರು ಮೇ 14: ಯುವತಿಯ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದು, ಆದರೆ ಆರೋಪಿ ಪೊಲೀಸ್ ರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರೋಪಿಗೆ ಗುಂಡೆಟಿನ ರುಚಿ ತೋರಿಸಿದ್ದಾರೆ.
ಪ್ರೀತಿ ನಿರಾಕರಿಸಿದ ಆರೋಪದ ಮೇಲೆ ಯುವತಿಗೆ ಎಪ್ರಿಲ್ 28 ರಂದು ಆರೋಪಿ ಆಸಿಡ್ ಎರಚಿ ಪರಾರಿಯಾಗಿದ್ದ, ಪೊಲೀಸರು 15 ತಂಡಗಳನ್ನು ರಚಿಸಿ ಆರೋಪಿ ಪತ್ತೆಗೆ ಯತ್ನಿಸಿದ್ದಾರೆ. ಆದರೆ ಆರೋಪಿ ನಾಗೇಶ್ ಮಾತ್ರ ತಮಿಳುನಾಡಿನಲ್ಲಿ ಸ್ವಾಮಿಜಿ ವೇಷ ಧರಿಸಿ ತಲೆ ಮರೆಸಿಕೊಂಡಿದ್ದ. ಕೊನೆಗೂ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸು ಬೆಂಗಳೂರಿಗೆ ಕರೆ ತಂದಿದ್ದಾರೆ. ಬೆಂಗಳೂರಿಗೆ ಕರೆ ತರುವಾಗ ಎಸ್ಕೇಪ್ ಆಗಲು ಯತ್ನಿಸಿದ್ದ ನಾಗನ ಕಾಲಿಗೆ ಪೊಲೀಸರು ಕೆಂಗೇರಿ ಬ್ರಿಡ್ಜ್ ಬಳಿ ಗುಂಡೇಟು ನೀಡಿದ್ದಾರೆ. ಸದ್ಯ ನಾಗ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೂತ್ರ ವಿಸರ್ಜನೆಗೆ ನಿಲ್ಲಿಸಿ ಅಂತ ನೈಸ್ ರೋಡಲ್ಲಿ ಕೇಳಿಕೊಂಡಿದ್ದ. ಇದಕ್ಕೆ ಅವಕಾಶ ಕೊಡದ ಪೊಲೀಸರು, ಬೆಂಗಳೂರು ಸಿಟಿಯ ಕೆಂಗೇರಿ ಮೇಲ್ಸೇತುವೆ ಬಳಿ ನಿಲ್ಲಿಸಿದ್ರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆತನನ್ನ ಹಿಡಿಯಲು ಹೋದ ಕಾನ್ಸ್ ಟೇಬಲ್ ಮಹಾದೇವಯ್ಯರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಆರೋಪಿಯನ್ನ ಹಿಡಿಯಲು ಗಾಳಿಯಲ್ಲಿ ಒಮ್ಮೆ ಗುಂಡು ಹಾರಿಸಿ ಕಾಮಾಕ್ಷಿಪಾಳ್ಯ ಠಾಣೆಯ ಇನ್ಸ್ ಪೆಕ್ಟರ್ ಪ್ರಶಾಂತ್ ಎಚ್ಚರಿಕೆ ನೀಡಿದರು.