Connect with us

LATEST NEWS

ಲವ್ ಜಿಹಾದ್ ವಿರುದ್ದ ಕಠಿಣ ಕ್ರಮ – ಸಿಎಂ ಬಿಎಸ್ ವೈ

ಮಂಗಳೂರು ನವೆಂಬರ್ 5: ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ವಾಗುತ್ತಿದ್ದು, ಈ ಕುರಿತಂತೆ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದ್ದು, ಕರ್ನಾಟಕದಲ್ಲಿ ಈ ವ್ಯವಸ್ಥೆಯನ್ನು ಕೊನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.


ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು ಕರಾವಳಿಯಲ್ಲಿ ಆಂತರಿಕ ಭದ್ರತೆಗೆ ಪ್ರಾಶಸ್ತ್ಯ ಕೊಡಲು ನಿರ್ಧರಿಸಲಾಗಿದೆ ಎಂದರು. ರಾಜ್ಯದಲ್ಲಿ ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗುತ್ತಿದ್ದು, ಎಲ್ಲಾ ಶಾಸಕರಿಗೆ 50 ಲಕ್ಷ ಅನುದಾನ ಬಿಡುಗಡೆಯಾಗಲಿದೆ.

ಅಲ್ಲದೆ ಮಂಗಳೂರು ನಗರಕ್ಕೆ 125 ಕೋಟಿ ಅನುದಾನ ಸಿಗಲಿದ್ದು ಅದರಲ್ಲಿ 50 ಕೋಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ಪರಿಣಾಮಕಾರಿಯಾಗಿ ಕಾರ್ಯ ನಡೆಯುತ್ತಿದ್ದು ಡ್ರಗ್ಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದರು.

Facebook Comments

comments