LATEST NEWS
ರೋಗಿಗಳು ಮೃತಪಟ್ಟರೆ ಅಂತಹ ವೈದ್ಯರ ಮೇಲೆ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ, ಮೇ 21: ಕೋರೊನಾ ಲಕ್ಷಣವಿದ್ದರೆ ತಾತ್ಕಾಲಿಕ ಉಪಶಮನ ಚಿಕಿತ್ಸೆ ನೀಡಬೇಡಿ, ಕೊರೋನಾ ಸೋಂಕಿನ ಬಗ್ಗೆ ಪರೀಕ್ಷೆ ಮಾಡಿಸಿ ವರದಿ ಪಡೆಯಿರಿ ಎಂದು ಜಿಲ್ಲೆಯ ವೈದ್ಯರಿಗೆ ಉಡುಪಿ ಡಿಸಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಕ್ಲೀನಿಕ್ ಗಳಲ್ಲಿ ರೋಗಿಗಳಿಗೆ ತಾತ್ಕಾಲಿಕ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ರೋಗ ಉಲ್ಬಣಗೊಳ್ಳುತ್ತಾ ಹೋಗತ್ತಿದೆ. ರೋಗಿಗಳು ಮೃತಪಟ್ಟರೆ ಅಂತಹ ವೈದ್ಯರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ.

ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳು 2020 ರ ಕಾಯ್ದೆಯಂತೆ ಕ್ರಮ ಕೈಗೊಳ್ಳಲಾಗುತ್ತದೆ, ನಿರ್ಲಕ್ಷ್ಯ ತೋರಿದರೆ ವೈದ್ಯರ ಪರವಾನಿಗೆ ಅಮಾನತು ಮಾಡಲಾಗುವುದು.
ಜಿಲ್ಲೆಯಲ್ಲಿಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿದೆ. ಸೋಂಕಿತರು ಕೊನೆಯ ಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಪ್ರಾರಂಭದಲ್ಲಿ ಸ್ಥಳೀಯ ಕ್ಲಿನಿಕ್/ಡಾಕ್ಟರ್ ಹತ್ತಿರ ಹೋಗ್ತಾರೆ. ಜ್ವರ, ಶೀತ,ಕೆಮ್ಮುಗಳಿಗೆ ಕ್ಲೀನಿಕ್ ನಲ್ಲಿ ಔಷಧಿ ಪಡೆಯುತ್ತಿದ್ದು ಮರಣ ಪ್ರಮಾಣ ಹೆಚ್ಚಲು ಕಾರಣವಾಗಿದೆ. ಕೋವಿಡ್ ದೃಢಪಟ್ಟಲ್ಲಿ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡಬಹುದು ಎಂದು ಡಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.