Connect with us

    LATEST NEWS

    ಪೌರಾಡಳಿತ ಇಲಾಖೆಯಲ್ಲಿ 3000 ಹುದ್ದೆ ನೇಮಕಾತಿಗೆ ಕ್ರಮ- ಸಚಿವ ಈಶ್ವರ ಖಂಡ್ರೆ

    ಪೌರಾಡಳಿತ ಇಲಾಖೆಯಲ್ಲಿ 3000 ಹುದ್ದೆ ನೇಮಕಾತಿಗೆ ಕ್ರಮ- ಸಚಿವ ಈಶ್ವರ ಖಂಡ್ರೆ

    ಉಡುಪಿ ಮಾರ್ಚ್ 9 : ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 3000 ಹುದ್ದೆಗಳ ನೇಮಕಾತಿ ಕುರಿತಂತೆ ಕೆಪಿಎಸ್ಸಿ ಗೆ ಪತ್ರ ಬರೆಯಲಾಗಿದ್ದು, ಶೀಘ್ರದಲ್ಲಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇಲ್ಲವಾಗಲಿದೆ ಎಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

    ಅವರು ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ರಾಜ್ಯದ್ಯಾಂತ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಈಗಾಗಲೇ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ,ಅಲ್ಲದೇ ಇಲಾಖೆಯಲ್ಲಿ ವಿವಿಧ ವರ್ಗದ 3000 ಹುದ್ದೆಗಳ ನೇಮಕಾತಿ ಮಾಡುವ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಖಂಡ್ರೆ ಹೇಳಿದರು.

    ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ದೀಪ ನಿರ್ವಹಣೆಗೆ ಎಲ್.ಎ.ಡಿ ಸೋಲಾರ್ ದೀಪ ಅಳವಡಿಸುವ ಕುರಿತಂತೆ ಈಗಾಗಲೇ ಸೂಚನೆ ನೀಡಲಾಗಿದೆ, ಎಲ್.ಎ.ಡಿ ಬಳಕೆಯಿಂದ ಸುಮಾರು 70% ವಿದ್ಯುತ್ ಉಳಿತಾಯ ಸಾದ್ಯವಾಗಲಿದೆ ಎಂದು ಸಚಿವರು ಹೇಳಿದರು.

    ಉಡುಪಿ ಜಿಲ್ಲೆಯಲ್ಲಿ ಅಮೃತ್ ಯೋಜನೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಾಮಗಾರಿ ನಡೆಯದ ಕುರಿತು ಅಸಮಧಾನ ವ್ಯಕ್ತಪಡಿಸಿದ ಸಚಿವರು, ಘನತ್ಯಾಜ್ಯ ವಿಲೇವಾರಿಯನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಸಮರ್ಪಕ ರೀತಿಯಲ್ಲಿ ಅಳವಡಿಸಿಕೊಳ್ಳುವಂತೆ ಸೂಚಿಸಿದರು, ನಗರೋತ್ಥಾನ 3 ನೇ ಹಂತದ ಕಾಮಗಾರಿಗಳನ್ನು ಶೀಘ್ರದಲ್ಲಿ ಪ್ರಾರಂಭಿಸುವಂತೆ ಸೂಚಿಸಿದ ಸಚಿವರು, ನಗರೋತ್ಥಾನ, ಎಸ್.ಎಫ್.ಸಿ, ವಿಶೇಷ ಎಸ್.ಎಫ್.ಸಿ ಸೇರಿದಂತೆ ವಿವಿಧ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳನ್ನು ಸಮಯ ಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

    ಪೌರಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದ ಸಚಿವರು, ಸಾರ್ವಜನಿರಿಗೆ ಅಗತ್ಯ ಸೇವೆಗಳನ್ನು ಸಮಯ ಮಿತಿಯಲ್ಲಿ ನೀಡುವಂತೆ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಪ್ರಯತ್ನಿಸುವಂತೆ ಸೂಚಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply