DAKSHINA KANNADA
ಕಾರು-ಆ್ಯಕ್ಟಿವಾ ಸ್ಕೂಟರ್ ನಡುವೆ ಭೀಕರ ಅಪಘಾತ – ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಪುತ್ತೂರು ಎಪ್ರಿಲ್ 24: ಕಾರು-ಆ್ಯಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ ಬಳಿ ನಡೆದಿದೆ.
ಗಾಯಗೊಂಡ ಸವಾರನನ್ನು ಕೊಡಿಪ್ಪಾಡಿ ರಫೀಕ್ (32) ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ರಪೀಕ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಕೂಡಲೇ ಅವರನ್ನು ಹತ್ತಿರದ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
