FILM
ಖ್ಯಾತ ಪೋಷಕ ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು
ಬೆಂಗಳೂರು ಸೆಪ್ಟೆಂಬರ್ 26: ಕನ್ನಡದ ಸಿನೆಮಾ ರಂಗದ ಖ್ಯಾತ ಪೋಷಕ ನಟ ಬ್ಯಾಂಕ್ ಜನಾರ್ಧನ್ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬ್ಯಾಂಕ್ ಜನಾರ್ದನ್ಗೆ 74 ವರ್ಷ ವಯಸ್ಸಾಗಿದೆ. ನಿನ್ನೆ ಸಂಜೆ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತ ಉಂಟಾಗಿದೆ. ಸದ್ಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ನಾಳೆ ಜನಾರ್ಧನ್ ಅವರಿಗೆ ಆಂಜಿಯೋಗ್ರಾಮ್ ಮಾಡುವ ಸಾಧ್ಯತೆ ಇದೆ. ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ ಹೆಸರು ಮಾಡಿದ್ದರು. ಬಳಿಕ ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್ನಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.
ತಂದೆಯ ಆರೋಗ್ಯದ ಕುರಿತು ಮಾಹಿತಿ ನೀಡಿರುವ ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದಿದ್ದಾರೆ.
You must be logged in to post a comment Login